Home ಸುದ್ದಿಗಳು ‘ಕಾವಾ’ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಸುದ್ದಿಗಳು

‘ಕಾವಾ’ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ): ಮೈಸೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿರುವ ಸಿದ್ದಾರ್ಥನಗರದ ‘ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ’ (ಕಾವಾ), 2026-27ನೇ ಸಾಲಿನ ಪ್ರಥಮ ವರ್ಷದ ಬಿ.ವಿ.ಎ (B.V.A.) ಪದವಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಪ್ರವೇಶ ಬಯಸುವವರು ಮೇ 30ರೊಳಗೆ ಅರ್ಜಿ ಸಲ್ಲಿಸಬೇಕು.

ವಿಶೇಷತೆ: ಈ ಪದವಿಯ 3ನೇ ಸೆಮಿಸ್ಟರ್‌ನಿಂದ ವಿದ್ಯಾರ್ಥಿಗಳು ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಪತ್ರಿಕೋದ್ಯಮದಲ್ಲಿ ವಿಶೇಷ ಅಧ್ಯಯನ ನಡೆಸಲು ಅವಕಾಶವಿದೆ. ಅರ್ಜಿ ಸಲ್ಲಿಸಿದವರಿಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು https://uucms.karnataka.gov.in ಅಥವಾ https://www.cavamysore.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.