Home ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ
Homeಕೃಷಿ

ಜಿಲ್ಲೆಯಲ್ಲಿ ಭೀಕರ ಬರಛಾಯೆ: ಬರ ಅಧ್ಯಯನಕ್ಕೆ ಅಖಾಡಕ್ಕಿಳಿದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

Share
Share
ವಿಜಯನಗರ(ಹೊಸಪೇಟೆ) : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಬರ ಹಾಗೂ ಮಳೆ ಅಭಾವದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪರಿಸ್ಥಿತಿಯ ಗಂಭೀರತೆಯನ್ನು  ಕೃಷಿ ಕ್ಷೇತ್ರದ ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಅಧಿಕಾರಿಗಳೊಂದಿಗೆ ಮಂಗಳವಾರ (ಜುಲೈ 21) ಬೆಳಿಗ್ಗೆಯಿಂದಲೇ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ಹಾನಿ ಹಾಗೂ ಕೃಷಿ ಸ್ಥಿತಿಗತಿ ಕುರಿತು ಪರಿಶೀಲನೆ  ಮತ್ತು ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಬೆಳಗ್ಗೆ 9 ರಿಂದ ವಿವಿಧೆಡೆ ಜಿಲ್ಲಾ ಪ್ರವಾಸ : ಹೊಸಪೇಟೆಯಿಂದ ಬೆಳಗ್ಗೆ 9 ಗಂಟೆಗೆ ಅಧಿಕಾರಿಗಳ ತಂಡದೊಂದಿಗೆ ಪ್ರವಾಸ ಆರಂಭವಾಗಿ  ನಂದಿಬಂಡಿಗೆ ಗ್ರಾಮದಲ್ಲಿನ ಜೋಳ ಹಾಗೂ ಮೆಕ್ಕೆಜೋಳ ಬೆಳೆಗಳನ್ನು ವೀಕ್ಷಿಸಿ ರೈತರ ಸಂಕಷ್ಟಗಳನ್ನು ಅಲಿಸುವರು.  ನಂತರ  ಬೆಳಿಗ್ಗೆ 10.15 ರಿಂದ 10.45 ರವರೆಗೆ ಹೂವಿನಹಡಗಲಿ ತಾಲೂಕಿನ ಹಂಪಾಪಟ್ಟಣಕ್ಕೆ ಭೇಟಿ ನೀಡಿ ಮೆಕ್ಕೆಜೋಳ ಹಾಗೂ ಇತರೆ ಬೆಳೆಗಳ ಸ್ಥಿತಿಗತಿ ಪರಿಶೀಲಿಸುವರು.
ಬೆಳಿಗ್ಗೆ 11ರಿಂದ 11.30 ರವರೆಗೆ ಮಾದೂರು ಗ್ರಾಮದಲ್ಲಿ ಕೃಷಿ ಜಮೀನುಗಳಿಗೆ ಭೇಟಿ ನೀಡುವರು. ಬೆಳಿಗ್ಗೆ 11.30 ರಿಂದ11.45 ಹಗರಿಬೊಮ್ಮನಹಳ್ಳಿಯಲ್ಲಿ ವಿವಿಧ ಬೆಳೆಗಳ ಪರಿಶೀಲನೆ ಹಾಗೂ ಮಧ್ಯಾಹ್ನ 12.15  ರಿಂದ 12.45 ರವರೆಗೆ ಹಡಗಲಿ ತಾಲೂಕಿನ ಇಟಗಿಯಲ್ಲಿ ಸೂರ್ಯಕಾಂತಿ, ಈರುಳ್ಳಿ ಮತ್ತು ಮೆಕ್ಕೆಜೋಳ ಬೆಳೆಗಳನ್ನು ಖುದ್ದಾಗಿ ವೀಕ್ಷಣೆ ಮಾಡುವರು.
ಮಧ್ಯಾಹ್ನ 1.15 ರಿಂದ 1.45 ಹರಪನಹಳ್ಳಿ ತಾಲೂಕಿನ ಮೈದೂರು ಮತ್ತು ಚಿಗಟೇರಿಯಲ್ಲಿ ಮೆಕ್ಕೆಜೋಳ ಮತ್ತಿತರ ಬೆಳೆಗಳ ತಪಾಸಣೆ ಮಾಡಲಿದ್ದಾರೆ. ಮಧ್ಯಾಹ್ನ 2 ರಿಂದ 3 ಪ್ರವಾಸ ಮಂದಿರದಲ್ಲಿ ಮಧ್ಯಾಹ್ನದ ಉಪಹಾರ ಹಾಗೂ ಅಧಿಕಾರಿಗಳೊಂದಿಗೆ  ಸಭೆ ನಡೆಸುವರು.
ನಂತರ ಮಧ್ಯಾಹ್ನ 3.15 ರಿಂದ 3:l.30 ಹರಪನಹಳ್ಳಿ ತಾಲೂಕಿನ ನಿಚಾಪುರದಲ್ಲಿ ಮೆಕ್ಕೆಜೋಳ ಬೆಳೆ ಹಾಗೂ ಸಂಜೆ 4.10 – ರಿಂದ 4.40 ಕೊಟ್ಟೂರು ತಾಲೂಕಿನ ಮಲ್ಲನಾಯಕನಹಳ್ಳಿಯಲ್ಲಿ ಸೂರ್ಯಕಾಂತಿ ಹಾಗೂ ಮೆಕ್ಕೆಜೋಳ ಬೆಳೆ ವೀಕ್ಷಿಸಿ ರೈತರ ಕುಂದುಕೊರತೆ ಸ್ವೀಕರಿಸಿದ ಅವರು ಸಂಜೆ 5.30 ರಿಂದ 5.45 ಅಮ್ಮನಕೇರಿಯಲ್ಲಿ ಮೆಕ್ಕೆಜೋಳ ಬೆಳೆ ಪರಿಶೀಲಿಸಿ ರೈತರೊಂದಿಗೆ ಸುದೀರ್ಘ ಚರ್ಚೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.