Home ವಿಕಲಚೇತನರಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Homeಸುದ್ದಿಗಳು

ವಿಕಲಚೇತನರಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Share
Share

ವಿಜಯನಗರ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ 14 ಫಲಾನುಭವಿ ಆಧಾರಿತ ಸೌಲಭ್ಯಗಳನ್ನು ಒದಗಿಸಲು ಇಲಾಖೆ ಯೋಜನೆಯಡಿ ಡಿ.ಬಿ.ಟಿ. (ನೇರ ನಗದು ವರ್ಗಾವಣೆ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ. ಫಲಾನುಭವಿಗಳು ಆಯಾ ಗ್ರಾಮ ಪಂಚಾಯತಿಯ ವಿಆರ್‌ಡಬ್ಲು , ನಗರಸಭೆ, ಪಟ್ಟಣ ಪಂಚಾಯತಿಯ ಯುಆರ್‌ಡಬ್ಲೂ ಹಾಗೂ ತಾಲ್ಲೂಕು ಹಂತದಲ್ಲಿ ಕೆಳಗಿನ ಬಹುಉದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಎಂಆರ್‌ಡಬ್ಲೂ ಸಂಪರ್ಕಿಸಬಹುದು.

ಯೋಜನೆ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳು ಇಲಾಖೆ ಅಧಿಕೃತ ಜಾಲತಾಣ  https://sevaone.karnataka.gov.in  ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಎಸ್.ಪಿ ಕಛೇರಿ ಹಿಂಭಾಗ, ರೂಮ್ ನಂ. 4 ಮತ್ತು 5 ಅನೆಕ್ಸ್ ಕಟ್ಟಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಎಕರೆಗೆ 25 ಸಾವಿರ ಪರಿಹಾರಕ್ಕೆ ಒತ್ತಾಯ

ಹರಪನಹಳ್ಳಿ : ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ತಕ್ಷಣವೇ ಎಕರೆಗೆ...

Homeಸುದ್ದಿಗಳು

ನನ್ನೊಳಗಿನ ಮೌನದ ಮಾತು’ ಕವನ ಸಂಕಲನ

ಹರಪನಹಳ್ಳಿ: ಇಂದಿನ ದಿನಗಳಲ್ಲಿ ಓದುಗರ ಕೊರತೆಯಿಂದಾಗಿ ಕಾವ್ಯದ ಅಭಿರುಚಿ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದು ಸಾಹಿತಿ...

Homeಸುದ್ದಿಗಳು

ಉಪನ್ಯಾಸಕ ಡಾ. ಅಜ್ಜಯ್ಯಗೆ ಅಂತರರಾಷ್ಟ್ರೀಯ ‘ಗೋಲ್ಡನ್ ಐಕಾನ್’ ಪ್ರಶಸ್ತಿ ಗರಿ

ಹರಪನಹಳ್ಳಿ : ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರಬಂಧ ಮಂಡನೆ ಮಾಡಿದ ವಿಜಯನಗರ ಜಿಲ್ಲೆಯ...

Homeಸುದ್ದಿಗಳು

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪಾರಂಪರಿಕ ನಡಿಗೆ ಡಿಸಿ ಕವಿತಾ ಎಸ್ ಮನ್ನಿಕೇರಿ ಚಾಲನೆ

ವಿಜಯನಗರ : ವಿಶ್ವವಿಖ್ಯಾತ ಹಂಪಿಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪಾರಂಪರಿಕ ವೈಭವವನ್ನು ದೇಶ-ವಿದೇಶದ ಪ್ರವಾಸಿಗರಿಗೆ ಪರಿಚಯಿಸುವ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.