ವಿಜಯನಗರ (ಹೊಸಪೇಟೆ) : ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 10 ಶೀಘ್ರಲಿಪಿಗಾರರು, 03 ಅಟೆಂಡರ್ ಮತ್ತು ಪೀವನ್ 05 ಸೇರಿ ಒಟ್ಟು 18 ಹುದ್ದೆಗಳು ಹೊರಗುತ್ತಿಗೆ ಆಧಾರದಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಇದೇ ಜುಲೈ 15 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳ ಕೊಠಡಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಇ-ಮೇಲ್ ಐಡಿ pdj.vijayanagar@gmail.com ಅಥವಾ ದೂರವಾಣಿ ಸಂಖ್ಯೆ 08394-225186 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Leave a comment