Home ಗೌರಿ ಗಣೇಶ ಹಬ್ಬದ  ಮೆರವಣಿಗೆಗೆ ಡಿಜೆ  ನಿಷೇಧ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
Homeಸುದ್ದಿಗಳು

ಗೌರಿ ಗಣೇಶ ಹಬ್ಬದ  ಮೆರವಣಿಗೆಗೆ ಡಿಜೆ  ನಿಷೇಧ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

Share
Share
ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ  ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಮ್‌ಗಳು ಹಾಗೂ ಹೆಚ್ಚಿನ ಡೆಸಿಬಲ್ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಯನ್ನು ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 28 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್. ಮನ್ನಿಕೇರಿ ನಿಷೇಧಿಸಿ ಆದೇಶಿಸಿದ್ದಾರೆ.
ಗಣೇಶ ಹಬ್ಬದ ಮೆರವಣಿಗೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಡೆಸಿಬಲ್ ಉಳ್ಳ ಡಿಜೆ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳು ಹಾಗೂ ಶಬ್ದ ವರ್ಧಕ ಸಾಧನಗಳ ಅತಿಯಾದ ಬಳಕೆಯಿಂದ ಸಾರ್ವಜನಿಕರ ಮಾನಸಿಕ ಹಾಗೂ ಶಾರೀರಿಕ ಆರೋಗ್ಯ, ಜೀವಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ 1963,  ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ – 2000 ಹಾಗೂ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ, 2023 ರ ಕಲಂ 163 ರಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.