ವಿಜಯನಗರ(ಹೊಸಪೇಟೆ) : ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉದ್ಘಾಟನಾ ಕಾರ್ಯಕ್ರಮ ಜುಲೈ 25 ಬೆಳಿಗ್ಗೆ 9.30 ಕ್ಕೆ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಅನು ಶಿವರಾಮನ್ ಅವರು ನೂತನ ಪ್ರಾಧಿಕಾರವನ್ನು ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಜಿಲ್ಲೆಯ ಆಡಳಿತ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ, ಜಿಲ್ಲೆಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕೆ.ಎಂ. ರಾಜಶೇಖರ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ವಕೀಲರ ಸಂಘ ಅಧ್ಯಕ್ಷರು ಗುಜ್ಜಲ್ ನಾಗರಾಜ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಎನ್. ಸುಬ್ರಮಣ್ಯ ಸೇರಿದಂತೆ ಮತ್ತಿತರರು ಭಾಗವಹಿಸುವರು.
- District Legal Services Authority
- DLSA Vijayanagara Inauguration
- Hospet Court
- Hospet Lawyers Association
- Justice Anu Sivaraman
- Justice Pradeep Singh Yerur
- Karnataka High Court
- Legal News Karnataka
- Vijayanagara District Court
- Vijayanagara News
- ಉದ್ಘಾಟನೆ
- ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ
- ಕೆ ಎಂ ರಾಜಶೇಖರ್
- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ
- ಜಿಲ್ಲಾ ನ್ಯಾಯಾಲಯ
- ನ್ಯಾಯಮೂರ್ತಿ ಅನು ಶಿವರಾಮನ್
- ಪ್ರದೀಪ್ ಸಿಂಗ್ ಯೆರೂರ್
- ವಕೀಲರ ಸಂಘ ಹೊಸಪೇಟೆ
- ವಿಜಯನಗರ ಸುದ್ದಿ
- ಹೊಸಪೇಟೆ
Leave a comment