ವಿಜಯನಗರ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವವರಿಗಾಗಿ ಇದೇ ಸೆಪ್ಟಂಬರ್ 17 ರಂದು ನಗರದ ವಿಜಯನಗರ ಕಾಲೇಜು ಹತ್ತಿರ ಇರುವ ಬ್ರೇಂಟ್ ಇಂಡಿಯಾ ಸೊಸೈಟಿಯಲ್ಲಿ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು-ಬರೆಯಲು ಬರುತ್ತಿರಬೇಕು.
ಮಹಿಳೆಯರಿಗೆ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ದೂ.ಸಂ: 9449226221, 9448812974 ಮೂಲಕ ನೊಂದಯಿಸಿಕೊಳ್ಳಬವುದು ಎಂದು ಜಿಲ್ಲಾ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಉಪ ನಿರ್ದೇಶಕ ಶಿವಾನಂದ ಎಲಿಗಾರ ತಿಳಿಸಿದ್ದಾರೆ.
Leave a comment