Home ಸುದ್ದಿಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ
ಸುದ್ದಿಗಳು

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಉಚಿತ ತರಬೇತಿ: ಅರ್ಜಿ ಆಹ್ವಾನ

Share
Share

ವಿಜಯನಗರ (ಹೊಸಪೇಟೆ): ಭಾರತೀಯ ಸೇನೆ ಹಾಗೂ ಯುನಿಫಾರ್ಮ್ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಯ್ಕೆ ಪೂರ್ವ ಸಿದ್ಧತೆಗಾಗಿ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಅರ್ಹತೆಗಳು:

  • ವರ್ಗ: ಪ್ರವರ್ಗ-1, 2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • ವಿದ್ಯಾರ್ಹತೆ: 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಹಾಗೂ ಸರಾಸರಿ ಶೇ. 45ರಷ್ಟು ಅಂಕ ಗಳಿಸಿರುವುದು ಕಡ್ಡಾಯ.

  • ಆದಾಯ ಮಿತಿ: ಪ್ರವರ್ಗ-1ರ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಹಾಗೂ ಇತರ ಪ್ರವರ್ಗಗಳ ಅಭ್ಯರ್ಥಿಗಳ ಆದಾಯ ₹1 ಲಕ್ಷ ಮೀರಬಾರದು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಆ ಜಿಲ್ಲೆಯಲ್ಲಿಯೇ ತರಬೇತಿ ನೀಡಲಾಗುವುದು. ಆಸಕ್ತರು ಸಂಬಂಧಿಸಿದ ಜಿಲ್ಲಾ ಅಥವಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2225078 ಅನ್ನು ಸಂಪರ್ಕಿಸಬಹುದು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಯಲ್ಲಿ ನೇರ ಪಾವತಿಯಡಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು...

Homeಸುದ್ದಿಗಳು

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ...

Homeಸುದ್ದಿಗಳು

ಜುಲೈ 31ರಂದು ನೇರ ಸಂದರ್ಶನ

ವಿಜಯನಗರ(ಹೊಸಪೇಟೆ) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 31ರಂದು ಬೆಳಿಗ್ಗೆ 10ಗಂಟೆಗೆ...

Homeಸುದ್ದಿಗಳು

ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಲ್ಲಿ ಪ್ರತಿ ತಿಂಗಳು ಹುಂಡಿ ಎಣಿಕೆ ಕಡ್ಡಾಯ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ 'ಎ' ಮತ್ತು 'ಬಿ'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.