Home ಗಣೇಶೋತ್ಸವ ಪರವಾನಗಿಗೆ ಏಕ ಗವಾಕ್ಷಿ ವ್ಯವಸ್ಥೆ
Homeಸುದ್ದಿಗಳು

ಗಣೇಶೋತ್ಸವ ಪರವಾನಗಿಗೆ ಏಕ ಗವಾಕ್ಷಿ ವ್ಯವಸ್ಥೆ

Share
Share

ವಿಜಯನಗರ:ಪ್ರಸಕ್ತ ಸಾಲಿನ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಬಂಧಿಸಿದಂತೆ ಸಾರ್ವಜನಿಕರಿಗೆ ಮತ್ತು ವಿವಿಧ ಉತ್ಸವ ಸಮಿತಿಗಳಿಗೆ ಸುಲಭವಾಗಿ ಅನುಮತಿ ದೊರೆಯುವಂತೆ ಮಾಡಲು ಜಿಲ್ಲೆಯಾದ್ಯಂತ ತಾಲೂಕು ಮತ್ತು ನಗರ ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಅವರು ಆದೇಶಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದ ಅನುಮತಿ ಹಾಗೂ ಬ್ಯಾನರ್ ಅಳವಡಿಕೆ, ಜೆಸ್ಕಾಂ ಇಲಾಖೆಯಿಂದ ವಿದ್ಯುತ್ ಸಂಪರ್ಕ, ಅಗ್ನಿಶಾಮಕ ಇಲಾಖೆಯಿಂದ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಲೋಕೋಪಯೋಗಿ ಇಲಾಖೆಯಿಂದ ಪೆಂಡಾಲ್ ಸದೃಢತೆಯ ಪ್ರಮಾಣ ಪತ್ರ ಮತ್ತು ಧ್ವನಿವರ್ಧಕ ಬಳಕೆ, ಮೆರವಣಿಗೆಯ ಮಾರ್ಗ, ಸಮಯ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪೊಲೀಸ್ ಅನುಮತಿಗಾಗಿ ತಾಲೂಕು ಮಟ್ಟದ ಏಕ ಗವಾಕ್ಷಿ ಸಮಿತಿಯ ರಚನೆ ಮಾಡಲಾಗಿದೆ.

ಪ್ರತಿ ವರ್ಷ ಸಂಘಟಕರು ವಿವಿಧ ಇಲಾಖೆಗಳಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಕೊನೆಯ ಕ್ಷಣದ ಗೊಂದಲಗಳನ್ನು ನಿವಾರಿಸಲು ಏಕ ಗವಾಕ್ಷಿ ಕ್ರಮ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯು ಈಗಾಗಲೇ ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಆರಂಭಿಸಲಾಗಿದ್ದು, ಸೆಪ್ಟೆಂಬರ್ 14 ರವರೆಗೆ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಹಾಗೂ ಸಂಘಟಕರು ತಾಲೂಕು ಕಚೇರಿಗಳಲ್ಲಿ ಸ್ಥಾಪಿಸಲಾಗಿರುವ ಈ ಏಕ ಗವಾಕ್ಷಿ ಕೇಂದ್ರವನ್ನು ಸಂಪರ್ಕಿಸಿ ಅಗತ್ಯ ಪರವಾನಗಿಗಳನ್ನು ನಿಯಮಾನುಸಾರ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.