ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ಹರಪನಹಳ್ಳಿಯಲ್ಲಿ ಸೆ.19 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಆಯೋಜನೆ. ಸಾರ್ವಜನಿಕರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆ ಮುಂಭಾಗ, ಹೊಸಪೇಟೆ ರಸ್ತೆಯಲ್ಲಿನ ಡಾ.ಬಾಬು ಜಗಜೀವನ ರಾಂ ಸಮುದಾಯ ಭವನದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment