ವಿಜಯನಗರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನದ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ 14 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು ಮತ್ತು 5 ಫಾರ್ಮಸಿ ಅಧಿಕಾರಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದಡಿ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಸೆಪ್ಟೆಂಬರ್ 7 ರಂದು ಬೆಳಗ್ಗೆ 10.30 ರಿಂದ 2 ರೊಳಗಾಗಿ ನೇರವಾಗಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಖುದ್ದು ಹಾಜರಾಗಿ ಮೂಲ ದಾಖಲಾತಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Leave a comment