ವಿಜಯನಗರ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರ ಪ್ರಾಯೋಜಕತ್ವದಲ್ಲಿ ಉದ್ಯಮ ಸ್ಥಾಪಿಸಲು ಇಚ್ಛಿಸುವವರಿಗೆ ಸೆಪ್ಟೆಂಬರ್ 3 ಜಿಲ್ಲೆಯ ಹೊಸಪೇಟೆಯಲ್ಲಿ ಒಂದು ದಿನದ ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾದೆ.
ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಕರಿಸಬೇಕಾದ ಕ್ರಮ, ಉದ್ಯಮ ಸ್ಥಾಪನೆಗೆ ಅಗತ್ಯ ಕ್ರಮಗಳು, ಆಸಕ್ತರಿಗೆ ಪ್ರೇರೇಪಣೆ, ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಮತ್ತು ಪ್ರೋತ್ಸಾಹ, ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು. ಜೊತೆಗೆ ಬ್ಯಾಂಕಿಂಗ್ ವ್ಯವಹಾರಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಉದ್ಯಮ ನಿರ್ವಹಣೆ ವಿಧಾನಗಳು, ಉದ್ಯಮ ಪ್ರಾರಂಭದ ಹಂತಗಳು, ಸಾಲ ಸೌಲಭ್ಯಗಳು ಹಾಗೂ ಜಾಹೀರಾತು ಮತ್ತು ಮಾರುಕಟ್ಟೆ ತಂತ್ರಗಳ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತದೆ.
ಆಸಕ್ತ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಓದಲು ಬರೆಯಲು ಬರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9449226221 ಗೆ ಸಂಪರ್ಕಿಸಬಹುದು ಎಂದು ಸಿಡಾಕ್ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment