ವಿಜಯನಗರ(ಹೊಸಪೇಟೆ) : ಮಾನ್ಯುಯಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಹಾಗೂ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲು ಜಿಲ್ಲೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ಮತ್ತು ಪುನರ್ವಸತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳಿಗೆ ಸೇರಿದವರು ಮತ್ತು ಸಮುದಾಯದ ಪ್ರತಿನಿಧಿಸುವ 2 ಪುರುಷರು ಹಾಗೂ 2 ಮಹಿಳೆಯರು ಸಾಮಾಜಿಕ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪೋಟೋ, ವಾಸಸ್ಥಳ ಪ್ರಮಾಣ ಪತ್ರ, ಪೊಲೀಸ್ ಚಾರಿತ್ರ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಛೇರಿ ಅಥವಾ ಸಂಬಂದಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a comment