Home ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.78 ರಷ್ಟು ಮಳೆ ಕೊರತೆ : ಪರ್ಯಾಯ ಬೆಳೆ ಬೆಳೆಯಲು ಸೂಚನೆ
Homeಕೃಷಿ

ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ.78 ರಷ್ಟು ಮಳೆ ಕೊರತೆ : ಪರ್ಯಾಯ ಬೆಳೆ ಬೆಳೆಯಲು ಸೂಚನೆ

Share
Share

ವಿಜಯನಗರ(ಹೊಸಪೇಟೆ) : ಮುಂಗಾರು ಮಳೆ ಪ್ರಾರಂಭವಾಗಿ 40 ದಿನ ಕಳೆದರೂ ಜಿಲ್ಲಾದ್ಯಂತ ಪ್ರಸಕ್ತ ಸಾಲಿನಲ್ಲಿ ವಾಡಿಕೆ ಮಳೆಗಿಂತ ಶೇ.78 ರಷ್ಟು ಮಳೆ ಕಡಿಮೆಯಾಗಿದ್ದು, ಅದಕ್ಕೆ ಪರ್ಯಾಯವಾಗಿ ಅಲ್ಪ ಅವಧಿಯ ಬೆಳೆಗಳು ಬೆಳೆಯುವಂತೆ ಸಹಾಯಕ ಕೃಷಿ ನಿರ್ದೇಶಕ ಎಸ್. ಮನೋಹರ ಗೌಡ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಬಿತ್ತನೆ ಗುರಿ ಹೊಂದಿರುವ ಮಟ್ಟಕ್ಕಿಂತ ಕಡಿಮೆ ಬಿತ್ತನೆಯಾಗಿದ್ದು, ಪರ್ಯಾಯವಾಗಿ ಅಲ್ಪ ಅವಧಿಯ ಬೆಳೆಗಳು, ಬರ ನಿರೋಧಕ ತಳಿಗಳ ಬಿತ್ತನೆಯತ್ತ ಮುಖ ಮಾಡುವುದು ಅನಿವಾರ್ಯವಾಗಿದೆ. ಹವಾಮಾನ ವೈಪರಿತ್ಯ ಅಥವಾ ಮಳೆಯ ವಿಳಂಬದಂತಹ ಸಂದರ್ಭಗಳಲ್ಲಿ ರೈತರು ನಷ್ಟವನ್ನು ತಪ್ಪಿಸಲು ಪರ್ಯಾಯ ಕೃಷಿ ಪದ್ಧತಿಗಳನ್ನು ಕಾಲ ಕಾಲಕ್ಕೆ ಅಳವಡಿಸಿಕೊಳ್ಳಬೇಕು.

ಸಕಾಲಕ್ಕೆ ಮಳೆಯಾಗದಿದ್ದಾಗ ಕಡಿಮೆ ಅವಧಿಯ ಬೆಳೆಗಳನ್ನು ಬಿತ್ತುವುದು ಮತ್ತು ಮಣ್ಣಿನ ತೇವಾಂಶ ಕಾಪಾಡಿಕೊಳ್ಳಲು ಬೆಳೆ ಸಾಲುಗಳ ಮಧ್ಯೆ ಒಣಗಿದ ಎಲೆ ಅಥವಾ ಕಳೆಯನ್ನು ಹೊದಿಕೆಯಾಗಿ ಬಳಸುವುದರಿಂದ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಮೂಲಕ ರೈತರು ಬೆಳೆಗಳನ್ನು ಆಯ್ಕೆಮಾಡುವ ಸಂದರ್ಭದಲ್ಲಿ ಬರ ನಿರೋಧಕ ಬೆಳೆ ಮತ್ತು ತಳಿಗಳನ್ನು, ಕಡಿಮೆ ಅವಧಿಯ ಬೆಳೆ ಮತ್ತು ತಳಿಗಳನ್ನು, ಉತ್ಪಾದನಾ ವೆಚ್ಚ ಕಡಿಮೆ ಇರುವ ಹಾಗೂ ರೋಗ ಮತ್ತು ಕೀಟ ನಿರೋಧಕ ತಳಿಗಳನ್ನು ಆಯ್ಕೆ ಮಾಡಬೇಕು.

ಬಿತ್ತನೆ ಸಮಯದಲ್ಲಿ ಬೀಜಗಳನ್ನು ನೆನೆಸಿ ಬಿತ್ತುವುದು, ಪೊಟ್ಯಾಶ್, ಕ್ಯಾಲ್ಸಿಯಂ ಕ್ಲೋರೈಡ್ ಅಥವಾ ಸುಣ್ಣದಿಂದ ಬೀಜೋಪಚಾರ ಮಾಡಿದ ಬೀಜಗಳನ್ನು ಬಿತ್ತಬೇಕು. ಮುಂಗಾರು ಮಳೆ ತಡವಾಗಿದ್ದರಿಂದ ಪರ್ಯಾಯವಾಗಿ ಜೋಳ, ಹಿಂಗಾರು ಜೋಳ ಮತ್ತು ಸೂರ್ಯಕಾಂತಿ ಹಾಗೂ ಸಜ್ಜೆ, ತೊಗರಿ ಬೆಳೆಯನ್ನು ವೈಜ್ಞಾನಿಕವಾಗಿ ಮಿಶ್ರ ಬೆಳೆಗಳನ್ನು ಬೆಳೆಯಬೇಕು.

ರೈತರು ಭೂಮಿಯ ತೇವಾಂಶವನ್ನು ಕಾಪಾಡಲು ಸಾಲಿನಿಂದ ಸಾಲಿಗೆ ಅಂತರ ಹೆಚ್ಚಿಸಿ ನವಣೆ, ರಾಗಿ, ತೊಗರಿ ಅಲ್ಪ ಅವಧಿಯ ತಳಿಗಳನ್ನು ಬಿತ್ತುವುದರ ಮೂಲಕ ಅಂತರ ಬೇಸಾಯವನ್ನು ಅಳವಡಿಸಿಕೊಳ್ಳಬೇಕು ಜೊತೆಗೆ ಕಾವಲಿನ್ ದ್ರಾವಣ ಸಿಂಪಡಿಸುವುದು ಬರ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸಹಾಯಕ ಕೃಷಿ ನಿರ್ದೇಶಕ ಮನೋಹರ ಗೌಡ ಎಸ್ ಅವರು ತಿಳಿಸಿದ್ದಾರೆ.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.