Home ಆಗಸ್ಟ್ 28 ರಂದು ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀ ನುಲಿಯ ಚಂದಯ್ಯ ಜಯಂತಿ
Homeಸುದ್ದಿಗಳು

ಆಗಸ್ಟ್ 28 ರಂದು ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶ್ರೀ ನುಲಿಯ ಚಂದಯ್ಯ ಜಯಂತಿ

Share
Share

ವಿಜಯನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಇದೇ ಆಗಸ್ಟ್ 28 ರಂದು ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಉದ್ಘಾಟಿಸುವರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ ನಾಯ್ಕ ಉಪಸ್ಥಿತರಿರಲಿದ್ದು, ಶಾಸಕ ಹೆಚ್.ಆರ್.ಗವಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದ ಈ.ತುಕಾರಾಂ, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ, ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ಹಡಗಲಿ ಶಾಸಕ ಎಲ್.ಕೃಷ್ಣ ನಾಯಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ,

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಭಾಗವಹಿಸಲಿದ್ದಾರೆ.ಅತಿಥಿ ಉಪನ್ಯಾಸಕಿ ಈ.ಅಶ್ವಿನಿ ಕೇಶವ ಶ್ರೀ ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತು ಹಾಗೂ ಹಾವೇರಿ ಜಿಲ್ಲೆಯ ಗೊಟಗೋಡಿಯ ಕರ್ನಾಟಕ ಜಾನಪದ ವಿವಿಯ ಸಂಶೋಧನಾ ಅಧಿಕಾರಿ ಡಾ.ಮಲ್ಲಿಕಾರ್ಜುನ ಬಿ ಮಾನ್ಪಡೆ ಶ್ರೀ ನುಲಿಯ ಚಂದಯ್ಯನವರ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.