Home ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ
Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

Share
Share

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಿ, ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಜಾಸೇವೆ ಆಂದೋಲನ ಆಯೋಜಿಸಲಾಗಿದೆ. ಅಧಿಕಾರಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ತಹಶೀಲ್ದಾರ್ ಶೃತಿ ಎಂ ಮಾಳಪ್ಪಗೌಡರ ಹೇಳಿದರು.

ಹೊಸಪೇಟೆ ತಾಲ್ಲೂಕಿನ ಕಮಲಾಪುರ ರೈತ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರವೇ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳ ಆಲಿಸಬೇಕು ಎನ್ನುವ ಐತಿಹಾಸಿಕ ತೀರ್ಮಾನದೊಂದಿಗೆ ಪ್ರಜಾಸೇವೆ ಆಂದೋಲನ ಆರಂಭಿಸಲಾಗಿದೆ.

ಈ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 15 ಅರ್ಜಿ, ಶಿಕ್ಷಣ ಇಲಾಖೆ 4, ಸರ್ವೇ ಇಲಾಖೆ 2, ಕಮಲಾಪುರ ಪುರಸಭೆಗೆ ಸಂಬಂಧಿಸಿದಂತೆ 19 ಹಾಗೂ ತಾಲ್ಲೂಕು ಪಂಚಾಯತ್ ಗೆ ಸಂಬಂಧಿಸಿದ 5 ಸೇರಿದಂತೆ ಒಟ್ಟು 52 ಅರ್ಜಿಗಳು ಸಲ್ಲಿಕೆಯಾಗಿವೆ ಎಂದ ಅವರು, ಸಾರ್ವಜನಿಕರು  ಜಮೀನು, ಮೂಲಸೌಕರ್ಯ, ಪಿಂಚಣಿ ಹಾಗೂ ಇಲಾಖಾವಾರು ಸಮಸ್ಯೆಗಳ ಕುರಿತು ಸಲ್ಲಿಸಿರುವ  ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ರವಾನಿಸಿ, ನಿರ್ದಿಷ್ಟ ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಜಾಸೇವೆ ಆಂದೋಲನವು ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ರೂಪಿಸಲಾದ ಕಾರ್ಯಕ್ರಮ. ಪ್ರಜಾ ಸರ್ಕಾರಕ್ಕೆ ಅರ್ಥ ಬರುವ ರೀತಿಯಲ್ಲಿ ಸಾರ್ವಜನಿಕರ ಪ್ರತಿಯೊಂದು ಆಹವಾಲು ಸ್ವೀಕರಿಸಿ, ಕಾನೂನುಬದ್ಧವಾಗಿ ವಿಲೇವಾರಿ ಮಾಡಲು ತಾಲೂಕು ಆಡಳಿತ ಕಂಕಣ ಬದ್ಧವಾಗಿದೆ ಎಂದರು. ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಶೃತಿ ಅವರು ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ದೂರು,  ಅಹವಾಲು ಸ್ವೀಕರಿಸಿದರು. ಕಮಲಾಪುರ ಪುರಸಭೆ ವ್ಯಾಪ್ತಿಯ ರೈತರೊಬ್ಬರು ಕಳೆದ ಮೂರು ವರ್ಷಗಳಿಂದ ಪೋಡಿಗಾಗಿ ಅಲೆದಾಡುತ್ತಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಲ್ಲಿಸಲಾದ ಅಹವಾಲಿಗೆ ಸ್ಪಂದಿಸಿದ ಅವರು, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದು,  ಶೀಘ್ರವೇ ಪೋಡಿ ಪ್ರಕ್ರಿಯೆ ಪೂರ್ಣಗೊಳಿಸಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

ಸರ್ವೆ ನಂಬರ್ 901/2 ಜಮೀನಿಗೆ ಸರ್ಕಾರಿ ರಸ್ತೆ ಕಾಯ್ದಿರಿಸಿದ್ದರೂ ಖಾಸಗಿ ವ್ಯಕ್ತಿಯೊಬ್ಬರು ಅಡ್ಡಲಾಗಿ ತಡೆಗೋಡೆ ನಿರ್ಮಿಸಿ ರೈತರ ಸಂಚಾರಕ್ಕೆ ತೊಂದರೆ ನೀಡುತ್ತಿರುವ ಬಗ್ಗೆ ಮತ್ತೊಬ್ಬ ರೈತ ಮನವಿ ಸಲ್ಲಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ ಸೆಪ್ಟೆಂಬರ್ 17ರಂದು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಕಾನೂನಾತ್ಮಕವಾಗಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಧವಾ ವೇತನ, ವೃದ್ಧಾಪ್ಯ ವೇತನ ಮತ್ತು ವಿಶೇಷ ಚೇತನರಿಗೆ ನೀಡಲಾಗುವ ಪಿಂಚಣಿ ಆದೇಶ ಪತ್ರ ವಿತರಿಸಿದರು. ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಆಲಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಡಿ.ಬಿ. ವೀರಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಜೀಮಾ ಬಾನು ಸೇರಿದಂತೆ ವಿವಿಧ ಇಲಾಖೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಗೌರಿ ಗಣೇಶ ಹಬ್ಬದ  ಮೆರವಣಿಗೆಗೆ ಡಿಜೆ  ನಿಷೇಧ : ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ : ಮುಂಬರುವ ಗೌರಿ ಗಣೇಶ ಹಬ್ಬದ  ಮೆರವಣಿಗೆಗಳ ವೇಳೆಯಲ್ಲಿ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.