Home ಪಡಿತರ ಚೀಟಿ ಇ-ಕೆವೈಸಿ : ಜುಲೈ 15 ಕೊನೆಯ ದಿನ
Homeಸುದ್ದಿಗಳು

ಪಡಿತರ ಚೀಟಿ ಇ-ಕೆವೈಸಿ : ಜುಲೈ 15 ಕೊನೆಯ ದಿನ

Share
Share

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಪಡಿತರ ಚೀಟಿ ಫಲಾನುಭವಿಗಳು ಜುಲೈ 15ರೊಳಗಾಗಿ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಈಗಾಗಲೇ ಇ-ಕೆವೈಸಿ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ 7500, ಹಗರಿಬೊಮ್ಮನಹಳ್ಳಿ 5443, ಹೊಸಪೇಟೆ 5434, ಹಡಗಲಿ 3650, ಕೂಡ್ಲಿಗಿ 2977 ಹಾಗೂ ಕೊಟ್ಟೂರು 1258 ಸೇರಿದಂತೆ ಒಟ್ಟು 26262 ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಬೇಕಾಗಿದೆ.

ಈ ಕುರಿತು ಅನೇಕ ಬಾರಿ ಪತ್ರಿಕಾ ಪ್ರಕಟಣೆ ಮತ್ತು ಸ್ಥಳೀಯವಾಗಿ ವ್ಯಾಪಕ ಪ್ರಚಾರವನ್ನು ನೀಡಿದ್ದರೂ ಸಹ ಈ ವರೆಗೂ ಇ-ಕೆವೈಸಿ ಮಾಡಿಸದೇ ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ತುರ್ತಾಗಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಳಿಸಲು ನಿರ್ದೇಶನ ನೀಡಿದೆ.

ಆದ್ದರಿಂದ ಈ ಅಂತಿಮ ಅವಧಿ ಮೀರಿದ ನಂತರ ಇ-ಕೆವೈಸಿ ಬಾಕಿ ಉಳಿದ ಫಲಾನುಭವಿಗಳನ್ನು ಅನರ್ಹರೆಂದು ಪರಿಗಣಿಸಿ ಇಂತಹ ಪಡಿತರ ಚೀಟಿಗಳಲ್ಲಿನ ಸದಸ್ಯರುಗಳನ್ನು ಪಡಿತರ ಚೀಟಿಗಳಿಂದ ತೆಗೆಯಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.