Home ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ
Homeಸುದ್ದಿಗಳು

ವಸತಿ ಶಾಲೆಗಳ 6ನೇ ತರಗತಿ : ಅರ್ಜಿ ಆಹ್ವಾನ

Share
Share

ವಿಜಯನಗರ(ಹೊಸಪೇಟೆ) : ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖಾಂತರ ನಡೆದ 3 ಹಂತಗಳ ಸೀಟು ಹಂಚಿಕೆ ಪ್ರಕ್ರಿಯೆಯ ನಂತರ ಖಾಲಿ ಉಳಿದಿರುವ ಸ್ಥಾನಗಳಿಗೆ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆ ದಿನವಾಗಿದೆ.

ಈಗಾಗಲೇ ದಾಖಲಾತಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅನಿವಾರ್ಯ ಕಾರಣಗಳಿಂದ ವರ್ಗಾವಣೆ ಬಯಸಿದಲ್ಲಿ, ಅದೇ ವರ್ಗ ಹಾಗೂ ಲಿಂಗವಾರು ಸ್ಥಾನಗಳು ಲಭ್ಯವಿದ್ದರೆ ಮಾತ್ರ ಅವಕಾಶ ನೀಡಲಾಗುತ್ತದೆ. ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಪ್ರಸ್ತುತ ಹಂಚಿಕೆಯಾಗಿರುವ ಶಾಲೆಯ ಪ್ರಾಂಶುಪಾಲರಿಗೆ ವರ್ಗಾವಣೆ ಮನವಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು.

ಕೆಇಎಯಿಂದ ಆಯ್ಕೆಯಾಗಿಯೂ ಕಾರಣಾಂತರಗಳಿಂದ ಪ್ರವೇಶ ಪಡೆಯಲು ಸಾಧ್ಯವಾಗದ ಅಥವಾ ದಾಖಲಾತಿ ಮಾಡಿಕೊಳ್ಳದ ಅಭ್ಯರ್ಥಿಗಳಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡಲಾಗುತ್ತದೆ. ವಿಶೇಷ ವರ್ಗದಡಿ ಪ್ರವೇಶ ಪಡೆಯಬಯಸುವ ಅಥವಾ ಅರ್ಜಿ ತಿರಸ್ಕೃತಗೊಂಡಿರುವ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ಮೀಸಲಾತಿ ಹಾಗೂ ವಿಶೇಷ ವರ್ಗದ ಪ್ರಮಾಣ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಪ್ರಮಾಣ ಪತ್ರಗಳನ್ನು ಲಗತ್ತಿಸದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಮಕ್ಕಳಿಗೆ ರಾಜ್ಯದ ಯಾವುದೇ ವಸತಿ ಶಾಲೆಯಲ್ಲಿ ಖಾಲಿ ಇರುವ ಸ್ಥಾನಕ್ಕೆ ಲಿಂಗ, ವರ್ಗ ಅಥವಾ ಆರ್ಥಿಕ ಮಿತಿಯನ್ನು ಪರಿಗಣಿಸದೆ ನೇರವಾಗಿ ಪ್ರವೇಶ ಕಲ್ಪಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ನ್ಯಾಷನಲ್ ಕಾಲೇಜು ಹಿಂಭಾಗ, ವಿದ್ಯಾನಗರ ಹೊಸಪೇಟೆ ಅಥವಾ ತಮ್ಮ ಸಮೀಪದ ವಸತಿ ಶಾಲೆಗೆ ಸಲ್ಲಿಸಿ ಸ್ವೀಕೃತಿ ಪಡೆಯಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ. ಎ ಕಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹ: ತಹಸೀಲ್ದಾರರಿಗೆ ಬಿಜೆಪಿ ವತಿಯಿಂದ ಮನವಿ ಸಲ್ಲಿಕೆ

 ಹರಪನಹಳ್ಳಿ : ಇಂದು ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ...

Homeಸುದ್ದಿಗಳು

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ...

Homeಸುದ್ದಿಗಳು

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ...

Homeಸುದ್ದಿಗಳು

ಲಾಕಪ್ ಡೆತ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಹರಪನಹಳ್ಳಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಯುವಕನ ಲಾಕಪ್ ಡೆತ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಸಿಪಿಐ(ಎಂಎಲ್) ಹಾಗೂ ಪ್ರಗತಿಪರ ಕಟ್ಟಡ ಕಾರ್ಮಿಕರ ಸಂಘಗಳ ಮುಖಂಡರು ಆಗ್ರಹಿಸಿದ್ದಾರೆ. ಚಿತ್ತಾರಗೇರಿಯಲ್ಲಿರುವ  ಮೃತ ಖಲೀಲ್‌ ಅವರ ಮನೆಗೆ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.