ವಿಜಯನಗರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹೊಸಪೇಟೆ ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಸೆಪ್ಟೆಂಬರ್ 3 ರಂದು ಬೆಳಗ್ಗೆ 11 ಗಂಟೆಗೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ-1955 ಕುರಿತು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Leave a comment