Home ಹಾವಿನ ಕಡಿತದ ಔಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ
Homeಸುದ್ದಿಗಳು

ಹಾವಿನ ಕಡಿತದ ಔಷಧ ಲಭ್ಯತೆ ಕುರಿತು ಸುಳ್ಳು ಸುದ್ದಿ : ಕಿವಿಗೊಡಬೇಡಿ

Share
Share

ವಿಜಯನಗರ(ಹೊಸಪೇಟೆ) : ಸಾಮಾಜಿಕ ಜಾಲತಾಣಗಳಲ್ಲಿ ಹಾವಿನ ಕಡಿತಕ್ಕೆ 108 ಆಂಬುಲೆನ್ಸ್ನಲ್ಲೇ ಔಷಧ ಲಭ್ಯವಿದ್ದು, ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಔಷಧ ನೀಡುತ್ತಾರೆ ಎಂಬ ಗಾಳಿಸುದ್ದಿ ಹರಡಲಾಗುತ್ತಿದೆ. ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು
ಸ್ಪಷ್ಟಪಡಿಸಿದ್ದಾರೆ.

ಹಾವಿನ ಕಡಿತಕ್ಕೆ ಆಂಟಿ-ಸ್ನೇಕ್ ವೆನಮ್  ಔಷಧವು ಹತ್ತಿರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ. ಆದ್ದರಿಂದ, ಹಾವಿನ ಕಡಿತಕ್ಕೊಳಗಾದವರು ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಉಚಿತವಾಗಿ ಚಿಕಿತ್ಸೆ ಮತ್ತು ಔಷಧವನ್ನು ಪಡೆದುಕೊಳ್ಳಬಹುದು ಎಂದು ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಉಪ್ಪಾರ ನೌಕರರಿಂದ ಪ್ರತಿಭಾ ಪುರಸ್ಕಾರ

ಹರಪನಹಳ್ಳಿ: ಹಬ್ಬ ಹರಿದಿನಗಳ ಆಚರಣೆಯಲ್ಲಿ ಮೇಲ್ವರ್ಗದ ಸಮುದಾಯಗಳಿಗಿಂತ ಶೋಷಿತ ವರ್ಗದವರೇ ಹೆಚ್ಚು ದುಂದುವೆಚ್ಚ ಮಾಡುತ್ತಿರುವುದು ಕಳವಳಕಾರಿ...

Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.