ವಿಜಯನಗರ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ 2026 ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ನಗರದ ವಡಕರಾಯನ ದೇವಸ್ಥಾನದಿಂದ ಶಾನುಭೋಗ ವೃತ್ತದ ವರೆಗೆ ಮತದಾರರ ಜಾಗೃತಿ ಜಾಥಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮತದಾರರ ಜಾಗೃತಿ ಜಾಥ ಕಾರ್ಯಕ್ರಮವು ನಗರದ ವಡಕರಾಯನ ದೇವಸ್ಥಾನದಿಂದ ಆರಂಭವಾಗಿ ನಂತರ ಪಂಚಮುಖಿ ಆಂಜನೇಯ, ದೊಡ್ಡ ಮಸೀದಿ, ಗಾಂಧಿ ಚೌಕ್, ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ಚಲಿಸಿ ಪುನೀತ್ ರಾಜ್ ಕುಮಾರ್ ವೃತ್ತ ಬಳಿ ಮುಕ್ತಾಯಗೊಂಡಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಇ . ಬಾಲಕೃಷ್ಣ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶೃತಿ. ಎಂ. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Leave a comment