ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳ ವಿತರಣೆ ಪೈಕಿ ಈಗಾಗಲೇ 11,42,732 (ಶೇ.100) ಫಾರ್ಮ್ ಗಳನ್ನು ವಿತರಿಸಲಾಗಿದೆ.
ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಒಟ್ಟು 11,42,732 ಮತದಾರರಿದ್ದು. ಈಗಾಗಲೇ ಶೇ. 100 ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ.
ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 420527 (ಶೇ 36.80) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣ ಗೊಳಿಸಲಾಗಿದೆ. ಇದಲ್ಲದೆ, 1039 (ಶೇ. 0.09) ಮತದಾರರು ಸ್ವತಃ ಆನ್ಲೈನ್ ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ. ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 4481 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 3001 ಮತದಾರರರನ್ನು ಗುರುತಿಸಲಾಗಿದೆ.
ಅದಷ್ಟೇ ಅಲ್ಲದೇ ಈಗಾಗಲೇ 1306 ದಾಖಲಾಗಿರುವವರು ಹಾಗೂ 49 ಜನ ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಗುರುತಿಸಿ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.
Leave a comment