Home ಕಮಲಾಪುರದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಿಂದ ಅಧಿಕೃತ ಚಾಲನೆ
Homeಸುದ್ದಿಗಳು

ಕಮಲಾಪುರದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಜಿಲ್ಲಾಧಿಕಾರಿಗಳಿಂದ ಅಧಿಕೃತ ಚಾಲನೆ

Share
Share

ವಿಜಯನಗರ : ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಪಟ್ಟಣದ ಸ್ವಾತಂತ್ರ‍್ಯ ಹೋರಾಟಗಾರರಾದ ದೇಸಾಯಿ ಗುಂಡೂರಾವ್ ಅವರ ಕುಟುಂಬದ ಮತದಾರರಿಗೆ ಮತ್ತು ಹಳೆ ಮಲಪನ ಗುಡಿಯ ಪ್ರಸಿದ್ಧ ಡೊಳ್ಳು ಕುಣಿತ ಕಲಾವಿದರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾರ್ ಮಂಚಪ್ಪ ಅವರ ಕುಟುಂಬದ ಮತದಾರರಿಗೂ ಪ್ರಥಮ ಹಂತದಲ್ಲಿ ಗಣತಿ ನಮೂನೆ (ಎನ್ಯಾಮುರೇಷನ್ ಫಾರ್ಮ್) ನೀಡುವ ಮೂಲಕ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.

ಇಂದಿನಿಂದ ಜುಲೈ 29 ರವರಿಗೆ ಗಣತಿ ಕಾರ್ಯ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ 1234 ಬಿ.ಎಲ್‌.ಓ ಬೂತ್ ಮಟ್ಟದ ಅಧಿಕಾರಿಗಳು ಗಳು ಕಾರ್ಯನಿರ್ವಹಿಸಲಿದ್ದು, ಅವರು ಜಿಲ್ಲೆಯ ಪ್ರತಿಯೊಬ್ಬರ ಮನೆ ಮನೆಗೆ ಖುದ್ದಾಗಿ ಭೇಟಿ ನೀಡಿ, ಮತದಾರರ ವಿವರಗಳನ್ನು ಪರಿಶೀಲಿಸುವರು. ಅಧಿಕಾರಿಗಳು ಮನೆ ಮನೆ ಭೇಟಿ ನೀಡಿದಾಗ ನಿಗದಿತ ನಮೂನೆಯಲ್ಲಿ ಕುಟುಂಬದ ಹಾಲಿ ಮತದಾರರ ಸರಿಯಾದ ವಿವರಗಳನ್ನು ಭರ್ತಿ ಮಾಡಬೇಕು.

ಒಂದಕ್ಕಿಂತ ಹೆಚ್ಚು ಕಡೆ ಹೆಸರಿರುವುದು, ಮರಣ ಹೊಂದಿದವರ ಅಥವಾ ಶಾಶ್ವತವಾಗಿ ವಲಸೆ ಹೋದವರ ಹೆಸರುಗಳು ಪಟ್ಟಿಯಲ್ಲೇ ಮುಂದುವರಿದಿರುವುದನ್ನು ಗುರುತಿಸಿ ತೆಗೆದು ಹಾಕಲು ಸಹಕಾರಿಯಾಗಿದೆ.
ಒಂದೇ ಕುಟುಂಬದ ಎಲ್ಲಾ ಮತದಾರರ ಹೆಸರುಗಳು ಒಂದೇ ಕಡೆ ಮತ್ತು ಸರಿಯಾದ ಕ್ರಮದಲ್ಲಿ ಇರುವಂತೆ ಜೋಡಿಸಲು ಅವಕಾಶ ಕಲ್ಪಿಸಿದೆ.

ಆಧಾರ್ ಕಾರ್ಡ್ ಅಥವಾ ಇತರ ಅಧಿಕೃತ ದಾಖಲೆಗಳೊಂದಿಗೆ ಮತದಾರರ ಗುರುತಿನ ಚೀಟಿಯ ಮಾಹಿತಿ ಹೊಂದಾಣಿಕೆಯಾಗದಿದ್ದರೇ, ತಿದ್ದುಪಡಿ ಮಾಡಲು ಹಾಗೂ ಅರ್ಹ ಹೊಸ ಮತದಾರರನ್ನು ಸೇರ್ಪಡೆಗೊಳಿಸಲು ಇದು ಉತ್ತಮ ಅವಕಾಶ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ  ಉಪ ವಿಭಾಗಾಧಿಕಾರಿ ಪಿ.ವಿವೇಕಾನಂದ, ತಹಶೀಲ್ದಾರ್ ಶೃತಿ. ಎಂ, ಬೂತ್ ಮಟ್ಟದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ರಸ್ತೆ ನಿರ್ಮಾಣಕ್ಕೆ ಜಾಗ ತ್ಯಾಗ ಮಾಡಿದ ಗ್ರಾಮಸ್ಥರ ಋಣ ತೀರಿಸಲಾಗದು: ಶಾಸಕ ಹೆಚ್.ಆರ್. ಗವಿಯಪ್ಪ

ವಿಜಯನಗರ (ಹೊಸಪೇಟೆ) : ಊರಿನ ಸಾರ್ವಜನಿಕ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ತಮ್ಮ ಜಾಗ...

Homeಅಪರಾಧ

ಹರಪನಹಳ್ಳಿ: ನಕಲಿ ದಾಖಲೆ ಸೃಷ್ಟಿಸಿ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹರಪನಹಳ್ಳಿ : ನಕಲಿ ದಾಖಲೆ ಸೃಷ್ಟಿಸಿಕೊಂಡು ತನ್ನ ಹೆಸರಿಗೆ ಆಸ್ತಿ ಪತ್ರಗಳನ್ನು ಮಾಡಿಕೊಂಡು ಪರಾರಿಯಾಗಿದ್ದ 12...

Homeಸುದ್ದಿಗಳು

ಕೊಪ್ಪಳ : ಪ್ರತಿಭಾ ಪುರಸ್ಕಾರಕ್ಕೆ ಬನ್ನಿ

ಹರಪನಹಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹರಪನಹಳ್ಳಿ ತಾಲೂಕು ಘಟಕದ ವತಿಯಿಂದ 2026-27ನೇ ಸಾಲಿನ...

Homeಕೃಷಿ

ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ

ಹರಪನಹಳ್ಳಿ : ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕನ್ನು ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಆಗ್ರಹಿಸಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.