Home ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 960465 ನಮೂನೆಗಳ ಡಿಜಿಟಲಿಕರಣ
Homeಸುದ್ದಿಗಳು

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 960465 ನಮೂನೆಗಳ ಡಿಜಿಟಲಿಕರಣ

Share
Share

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಐದು ತಾಲೂಕಿನಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ ಒಟ್ಟು 11,42,732 ಇ ಫಾರ್ಮ್ ನಮೂನೆಗಳನ್ನು ಒಟ್ಟು 1234 ಮತಗಟ್ಟೆ ಮಟ್ಟದ ಅಧಿಕಾರಿಗಳು ಶೇ.100 ರಷ್ಟು ಗಣತಿ ನಮೂನೆಗಳ ವಿತರಿಸಿದ್ದಾರೆ. ಜೂನ್ 30 ರಿಂದ ಅಭಿಯಾನ ಪ್ರಾರಂಭವಾಗಿದ್ದು, ಆಗಸ್ಟ್ 8
ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಪ್ರಕ್ರಿಯೆ ನಡೆಯಲಿದೆ.

ವಿತರಿಸಲಾದ ಗಣತಿ ನಮೂನೆಗಳ ಪೈಕಿ ಒಟ್ಟು 960465 (ಶೇ.84.05) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣ ಗೊಳಿಸಲಾಗಿದೆ. ಇದಲ್ಲದೆ 2982 (ಶೇ.0.26) ಮತದಾರರು ಸ್ವತಃ ಆನ್ಲೈನ್  ಮೂಲಕ ನಮೂನೆಗಳನ್ನು ಸಲ್ಲಿಸಿದ್ದಾರೆ. ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 32110 ಮೃತ ಮತದಾರರು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡಿರುವ 44185 ಮತದಾರರರನ್ನು ಗುರುತಿಸಲಾಗಿದೆ.

ಅದಷ್ಟೇ ಅಲ್ಲದೇ ಈಗಾಗಲೇ 14065 ದಾಖಲಾಗಿರುವವರು ಹಾಗೂ 6326 ಜನ ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಗುರುತಿಸಿ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.