Home ಕೃಷಿ ವಿಜಯನಗರ ಜಿಲ್ಲೆಯ ಎಲ್ಲೆಲ್ಲಿ ಸೂರ್ಯಕಾಂತಿ ಖರೀದಿಸುತ್ತಾರೆ ?
ಕೃಷಿಸುದ್ದಿಗಳು

ವಿಜಯನಗರ ಜಿಲ್ಲೆಯ ಎಲ್ಲೆಲ್ಲಿ ಸೂರ್ಯಕಾಂತಿ ಖರೀದಿಸುತ್ತಾರೆ ?

Share
sunflower
Share

ವಿಜಯನಗರ (ಹೊಸಪೇಟೆ) :   ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲಾಗುವುದು. ಅದರಂತೆ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ, ಕೂಡ್ಲಿಗಿ ತಾಲ್ಲೂಕಿನ ಚಂದ್ರಶೇಖರಪುರ, ಹರಪನಹಳ್ಳಿಯ ನಂದಿಬೇವೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ತಲಾ ಒಂದರಂತೆ ಒಟ್ಟು 4 ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಾರಾಟ ಮಹಾಮಂಡಳಿ ವತಿಯಿಂದ ಪ್ರತಿ ಕ್ವಿಂಟಾಲ್  ರೂ.7721 ರಂತೆ ಪ್ರತಿ ರೈತರಿಂದ ಎಕರೆಗೆ 4 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ಉತ್ಪನ್ನವನ್ನು ಖರೀದಿಸಲಾಗುತ್ತದೆ.

ಈಗಾಗಲೇ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲಬೆಲೆ ಯೋಜನೆಯಡಿ ಗುಣಮಟ್ಟದ ಸೂರ್ಯಕಾಂತಿ ಖರೀದಿಗೆ ಮತ್ತು ನೊಂದಣಿಗಾಗಿ ರೈತರು ಪ್ರಸಕ್ತ ಸಾಲಿನ ಪಹಣಿ, ಆಧಾರ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಎಫ್‌ಐಡಿ ದಾಖಲೆಗಳೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿ ಕೊಳ್ಳಬಹುದಾಗಿದೆ. ಈ ಬಗ್ಗೆ ತಾಂತ್ರಿಕ ದೋಷಗಳಿದ್ದಲ್ಲಿ ಸಮೀಪದ ಕೃಷಿ ಇಲಾಖೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕೆ.ಎಸ್‍.ಎಫ್‍. ಅಧಿಕಾರಿ ರಾಘವೇಂದ್ರ ಮೊ.ಸಂ: 9591812123 ಗೆ ಸಂಪರ್ಕಿಸಬಹುದು. ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರೂ ಆದ ಕವಿತಾ ಎಸ್. ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.