Home ಸುದ್ದಿಗಳು ಹರಪನಹಳ್ಳಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ
ಸುದ್ದಿಗಳು

ಹರಪನಹಳ್ಳಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

Share
ಹರಪನಹಳ್ಳಿಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ
Share

ಹರಪನಹಳ್ಳಿ : ಅಂಗವಿಕಲ ಮಕ್ಕಳನ್ನು ಪಾಲನೆ ಪೋಷಣೆ ಮಾಡುವ ಪಾಲಕರು ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಮಂಗಳವಾರ ಆಯೋಜಿಸಿದ್ದ ವಿಶ್ವ ವಿಕಲಚೇತನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರು ದೇವರ ಮಕ್ಕಳಿದ್ದಂತೆ, ಅವರಿಗೆ ಅವಕಾಶಗಳನ್ನು ಒದಗಿಸಿಕೊಡಬೇಕು ಎಂದರು. ಕಾರ್ಯನಿರ್ವಾಹಕ ಅಧಿಕಾರಿ ವೈ ಎಚ್ ಚಂದ್ರಶೇಖರ್ ಮಾತನಾಡಿ, ವಿಕಲಚೇತನರ ಕಲ್ಯಾಣಕ್ಕಾಗಿ ಶೇ.೫ರಷ್ಟು ಮೀಸಲಾತಿ ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಕೀಲು ಮೂಳೆ ತಜ್ಞ ವೈದ್ಯ ಡಾ.ತಿಪ್ಪೇಸ್ವಾಮಿ ಮಾತನಾಡಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹಾಯಕ ನಿರ್ದೇಶಕ ರಾದ ಸೋಮಶೇಖರ್ , ವೀರಣ್ಣ ಲಕ್ಕಣ್ಣನವರ್, ಜೆಮರೇಣುಕಾ, ಬಿಸಿಎಂ ವಿಸ್ತರಣಾಧಿಕಾರಿ ಭೀಮಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಹೊನ್ನತ್ತೆಪ್ಪ, ಆರ್.ಧನರಾಜ್ ಇದ್ದರು.

 

 

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.