Home ಸುದ್ದಿಗಳು ವೈ.ಡಿ.ಅಣ್ಣಪ್ಪ ಅವರ ಹುಟ್ಟು ಹಬ್ಬ ಆಚರಣೆ
ಸುದ್ದಿಗಳು

ವೈ.ಡಿ.ಅಣ್ಣಪ್ಪ ಅವರ ಹುಟ್ಟು ಹಬ್ಬ ಆಚರಣೆ

Share
ಅರಸೀಕೆರೆ ಸಾಹುಕಾರ ವೈಡಿ ಅಣ್ಣಪ್ಪ ಅವರು ಹುಟ್ಟು ಹಬ್ಬ ಆಚರಣೆ
Share

ಹರಪನಹಳ್ಳಿ : ಬಡವರಿಗೆ, ನಿರ್ಗತಿಕರಿಗೆ ನೆರವು ನೀಡುವಂತಹ ಸಮಾಜಮುಖಿ ಕೆಲಸಗಳು ಜನಮಾನಸದಲ್ಲಿ ಉಳಿಯುತ್ತವೆ ಎಂದು ಅರಸೀಕೆರೆ ಕೋಲಶಾಂತೇಶ್ವರ ಮಠದ ಶಾಂತಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ತಾಲ್ಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ಅವರ 46ನೇ ವರ್ಷದ ಹುಟ್ಟು ಹಬ್ಬದ ಆಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಷ್ಟವೆಂದು ಬಂದಾಗ ಯಾವುದೇ ಪಕ್ಷ, ಜಾತಿ, ಧರ್ಮ ನೋಡದೆ ಸಹಕಾರ ಮಾಡುತ್ತಿರುವ ವೈ.ಡಿ.ಅಣ್ಣಪ್ಪ ಅವರು ಸಮಾಜದಲ್ಲಿ ಮಾದರಿ ವ್ಯಕ್ತಿಯಾಗಿದ್ದಾರೆ ಎಂದರು.

ಯೋಗನರಸಿಂಹ ಸೌಹಾರ್ದ ಸಹಕಾರಿ ಬ್ಯಾಂಕ್‍ ನ ಬಿತ್ತಿಪತ್ರಗಳು, 2026ನೇ ವರ್ಷದ ಕ್ಯಾಲೆಂಡರ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ನೀಲಗುಂದ ಗುಡ್ಡದ ವಿರಕ್ತಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಸಾನ್ನಿದ್ಯವಹಿಸಿ ಮಾತನಾಡಿದರು.        ಇದೇ ಸಂದರ್ಭದಲ್ಲಿ ಕೊಟ್ಟೂರಿನ ಶಿವಯೋಗಿ ರಾಜೇಂದ್ರ ಮಹಾ ಸ್ವಾಮಿಗಳು, ಮಾಜಿ ಸಂಸದ ವೈ. ದೇವೇಂದ್ರಪ್ಪ, ಯರಬಳ್ಳಿ ಉಮಾಪತಿ,  ಸುಶೀಲಮ್ಮ, ಚಂದನ, ಸಾನ್ವಿ,  ಪ್ರಶಾಂತ್ ಪಾಟೀಲ್, ಲಕ್ಷ್ಮಿದೇವಿ ಅಣ್ಣಪ್ಪ, ನಂಜನಗೌಡ, ಫಣಿಯಾಪುರದ ಲಿಂಗರಾಜ್, ಯರಬಳ್ಳಿ ವಿಜಯ್ ಕುಮಾರ್, ಅರಸೀಕೆರೆಯ ಬಿ.ರಾಮಣ್ಣ,ಪೂಜಾರ್ ಮರಿಯಪ್ಪ, ವೈ.ಎ.ಮಿಂಚು, ವೈ.ಎ. ಪ್ರೀತಮ್, ಪರಶುರಾಮ್, ಶ್ರೀನಿವಾಸ ಇತರರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಹರಪನಹಳ್ಳಿ : ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ 

ಪ್ರಜಾಸೇವ ಆಂದೋಲನ ಜನರ ಹೃದಯಕ್ಕೆ ಮುಟ್ಟುವಂತಿರಲಿ ಹರಪನಹಳ್ಳಿ :  ಹಿಂದೆ ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಭರವಸೆಯಿಲ್ಲದೆ...

Homeಸುದ್ದಿಗಳು

ಬಾಲಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ 

ಹೊಸಪೇಟೆ (ವಿಜಯನಗರ ಜಿಲ್ಲೆ ) : ಏಳು ವರ್ಷದ ಬಾಲಕನನ್ನು ಅಪಹರಿಸಿ ಕಾಲುವೆಗೆ ಎಸೆದು ಕೊಲೆ...

Homeಸುದ್ದಿಗಳು

ಜೆಡಿಎಸ್ ಅಧ್ಯಕ್ಷರಾಗಿ ವಿ. ಮಲ್ಕಪ್ಪ ಆಯ್ಕೆ

ಹರಪನಹಳ್ಳಿ : ತಾಲ್ಲೂಕು ಜಾತ್ಯಾತೀತ ಜನತಾದಳದ (ಜೆಡಿಎಸ್) ನೂತನ ಅಧ್ಯಕ್ಷರಾಗಿ ತಾವರೆಗೊಂದಿ ಗ್ರಾಮದ ವಿ. ಮಲ್ಕಪ್ಪ...

Homeಸುದ್ದಿಗಳು

ಮಕ್ಕಳಿಗೆ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರ ನೀಡುವ ಹೊಣೆ ಎಲ್ಲರದ್ದು: ಪ್ರಾಂಶುಪಾಲ ಡಾ. ಎಂ. ಸುರೇಶ್

ಹರಪನಹಳ್ಳಿ : 'ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವ ಹೊಣೆಯನ್ನು ಪ್ರತಿಯೊಬ್ಬರೂ ಹೊರಬೇಕು'...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.