Home ಸುದ್ದಿಗಳು ಸದೃಢ ಆರೋಗ್ಯಕ್ಕಾಗಿ ಯೋಗಾಭ್ಯಾಸ ಸಹಕಾರಿ : ಮಂಜುನಾಥ ಗುರೂಜಿ
ಸುದ್ದಿಗಳು

ಸದೃಢ ಆರೋಗ್ಯಕ್ಕಾಗಿ ಯೋಗಾಭ್ಯಾಸ ಸಹಕಾರಿ : ಮಂಜುನಾಥ ಗುರೂಜಿ

Share
YOGA-MANJUNATHGURUJI,JAGATAGERI
Share

 ಹರಪನಹಳ್ಳಿ  : ಔಷಧಿಗಳಿಂದ ತಾತ್ಕಾಲಿಕ ಚಿಕಿತ್ಸೆ ಸಿಗುತ್ತದೆ, ಆದರೆ ಯೋಗಾಭ್ಯಾಸದಿಂದ ಶಾಶ್ವತವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಯೋಗಗುರು ಮಂಜುನಾಥ ಗುರೂಜಿ ತಿಳಿಸಿದರು.

ಹರಪನಹಳ್ಳಿ ನಗರದ ಟಿಎಂಎಇ ಸಂಸ್ಥೆಯ ಜ್ಞಾನ ಗಂಗೋತ್ರಿ ಆವರಣದಲ್ಲಿ  ಅಘೋರಿಯುತ ಆನಂದ ಯೋಗ ಪ್ರಾಣಾಯಾಮ ತರಬೇತಿ ಶಿಬಿರದ ಸಹಯೋಗದಲ್ಲಿ ಶನಿವಾರ ರಾತ್ರಿ ಆರಂಭವಾದ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಆಡಂಬರದ ಜೀವನ ತ್ಯಜಿಸುವ ಅಘೋರಿಗಳು ನೂರಾರು ವರ್ಷ ಬದುಕುತ್ತಿರುವುದಕ್ಕೆ ಯೋಗವೆ ಪ್ರೇರಣೆ. 10 ದಿನ ಇಲ್ಲಿ ನಡೆಯುವ ಶಿಬಿರದಿಂದ ಯೋಗದ ಬಗ್ಗೆ ಹೆಚ್ಚಿನ ಜ್ಞಾನ ಪಡೆದು, ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು. ಯೋಗವು ಮನುಷ್ಯನಲ್ಲಿರುವ ಕಾಯಿಲೆ ದೂರ ಮಾಡುತ್ತದೆ, ಔಷಧಿ ಮುಕ್ತ ದೇಹವನ್ನಾಗಿಸಲು ಸಹಕಾರಿ ಆಗಿದೆ. ಹಾಗಾಗಿ ಪ್ರತಿಯೊಬ್ಬರು ಯೋಗದ ಅಭ್ಯಾಸ ರೂಡಿಸಿಕೊಳ್ಳಲು ಸಲಹೆ ನೀಡಿದರು.

ತೆಗ್ಗಿನಮಠದ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್ ಜಿ ಮನೋಹರ್, ರಾಜ್ಯ ಪರಿಷತ್ ಸದಸ್ಯ ಎಂ.ಶರೀಫ್, ಪ್ರಧಾನ ಕಾರ್ಯದರ್ಶಿ ಸೂರ್ಯನಾಯ್ಕ, ಎಚ್.ಎ.ಸುರೇಂದ್ರಬಾಬು,  ಬಾಗಳಿ ದುರುಗೇಶ್, ಷರೀಫ್, ಸುಬ್ಬಣ್ಣ, ಬಾಗಳಿ ಕೊಟ್ರೇಶಪ್ಪ, ಮರಿಯಪ್ಪ, ವೀರೇಶ್,  ಸಹರಾಬಾನು, ಗುರುಸಿದ್ದಯ್ಯ, ಓಂಕಾರಗೌಡ ಇತರರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಾಂಗ್ರೆಸ್ ಮುಖಂಡ ಶಶಿಧರ ಪೂಜಾರ ಜನ್ಮದಿನಾಚರಣೆ

ಹರಪನಹಳ್ಳಿ: ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಶಶಿಧರ ಪೂಜಾರ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು...

Homeಸುದ್ದಿಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ತಾಯಿಯ ಎದೆಹಾಲು ಅತ್ಯಗತ್ಯ: ಡಿಹೆಚ್‌ಒ ಡಾ.ಟಿ.ಲಿಂಗರಾಜು

ವಿಜಯನಗರ (ಹೊಸಪೇಟೆ) : ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ....

Homeಸುದ್ದಿಗಳು

ಸಂಪುಟ ವಿಸ್ತರಣೆ ಕೌತುಕಕ್ಕೆ ಇಂದು ತೆರೆ: ಸಂಜೆ ರಾಜಭವನದಲ್ಲಿ 20 ನೂತನ ಸಚಿವರ ಪದಗ್ರಹಣ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ...

Homeಸುದ್ದಿಗಳು

ನರೇಗಾ ಮಾದರಿ ಕಾಮಗಾರಿ ಮರುಸ್ಥಾಪನೆಗೆ ಆಗ್ರಹ

ಹರಪನಹಳ್ಳಿ : ಹೊಸದಾಗಿ ಜಾರಿಗೆ ತಂದಿರುವ ವಿಬಿಜಿ ರಾಮ್‍ಜಿ ಕಾಯ್ದೆಯಡಿ ಹಳೆಯ ನರೇಗಾ ಮಾದರಿ ಕಾಮಗಾರಿಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.