Home ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ
Homeಕ್ರೀಡೆ

ಹರಪನಹಳ್ಳಿಯಲ್ಲಿ ಗಮನ ಸೆಳೆದ ಬೀಳ್ಕೊಡುಗೆ

Share
kannada
Share

ಹರಪನಹಳ್ಳಿ : ಕ್ರೀಡೆ ಮತ್ತು ಇತರ ದೈಹಿಕ ಚಟುವಟಿಕೆಗಳು ಪಠ್ಯೇತರ ಚಟುವಟಿಕೆಗಳ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು ಸಕ್ರಿಯರಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಎಂದು ಸೊಂಡೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಸವರಾಜ ಹೆಬ್ಬಾಳ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು  ಆವರಣದಲ್ಲಿ  ಪಠ್ಯೇತರ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಂತಿಮ ವರ್ಷದ ಪದವಿ  ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನಕ್ಕೆ ಸನ್ನದ್ಧರಾಗಲು ಪ್ರಾಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿಗಳು ಮಾನವೀಯತೆಬೆಳೆಸಿಕೊಳ್ಳಬೇಕು ಹಾಗೂ ಯಶಸ್ಸಿನಿಂದ ಓದಬೇಕು ಎಂದರು.

ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಹರಾಳು ಬುಳ್ಳಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನಿಂದ ಇರಬೇಕು ಹಾಗೂ ಕಷ್ಟಪಟ್ಟು ಓದಬೇಕು. ಸರಕಾರಿ ಕಾಲೇಜುಗಳು ಯಾವ ಕಾಲೇಜುಗಳಿಗಿಂತಲೂ ಕಡಿಮೆ ಇಲ್ಲ ಎಲ್ಲಾ ವಿಭಾಗಗಳಲ್ಲಿ ಕಾಲೇಜುಗಳು ಸೌಲಭ್ಯಗಳನ್ನು ಹೊಂದಿದ್ದು ಪಠ್ಯೇತರ ಚಟುವಟಿಕೆಗಳ ಕಾರ್ಯಕ್ರಮಗಳನ್ನು ಹೊಂದಿದ್ದು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಹಾಗೂ ಕೌಶಲ್ಯವನ್ನು ಬೆಳೆಸಿಕೊಂಡು ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದರು.

ಪ್ರಾಂಶುಪಾಲರಾದ ಡಾ.ಕೆ.ಸತೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ  ಅಂತಿಮ ವರ್ಷದ ಪ್ರಾಜೆಕ್ಟ್‌ಗಳನ್ನು ಕೇವಲ ಶೈಕ್ಷಣಿಕ ದಾಖಲೆಯಾಗಿ ನೋಡದೆ, ನಿಮ್ಮ ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವ ಮೆಟ್ಟಿಲಾಗಿ ಪರಿಗಣಿಸಿ. ಇದು ನೈಜ-ಪ್ರಪಂಚದ ಸಮಸ್ಯೆಗಳನ್ನು ಬಗೆಹರಿಸಲು ಸಹಾಯ ಮಾಡುತ್ತದೆ ಎಂದ ಅವರು  ಶಿಕ್ಷಣದ ಜೋತೆ ನಯ ವಿನಯತೆ ಶಿಸ್ತು ಬಹುಮುಖ್ಯವಾಗಿದೆ ಎಂದರು.

ಸಬ್ ಇನ್ಸ್ಪೆಕ್ಟರ್  ಶಂಭುಲಿಂಗಪ್ಪ ಹಿರೇಮಠ್  ಮಾತನಾಡಿ,  ವಿದ್ಯಾರ್ಥಿಗಳು ಕಾಂಪಿಟೇಟಿವ್ ಪರಿಕ್ಷೆಗಳಲ್ಲಿ ಸಕ್ಸಸ್ ಆಗಿ ಸರಕಾರಿ ಹುದ್ದೆಗಳನ್ನು ಹಾಗೂ ಇತರೆ ಖಾಸಗಿ ಹುದ್ದೆಗಳನ್ನು ಶಿಸ್ತಿನಿಂದ ಓದಿ   ಕಷ್ಟಪಟ್ಟು ಶಿಸ್ತಿನಿಂದ ಹಾಗೂ ಪ್ಲಾನ್ ಸ್ಟಡಿ ಮಾಡಿ ಸಕ್ಸಸ್ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ  ದೈಹಿಕ ನಿರ್ದೇಶಕ ಡಾ.ಕೊಟ್ರೇಶ,ಸಹಾಯಕ ಪ್ರಾಧ್ಯಾಪಕ ಹುಚ್ಚರಾಯಪ್ಪ, ಉಪನ್ಯಾಸಕ ಡಾ.  ಎಂ.ಸುರೇಶ,ಡಾ.ತಿಪ್ಪೇಸ್ವಾಮಿ ಸೇರಿದಂತೆ ಇತರರು ಇದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಸುದ್ದಿಗಳು

ಕಲಬುರಗಿಯ ಸೇಂಟ್ ಮೇರಿಸ್ ಶಾಲೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಕಲಬುರಗಿ: ಕೊಟನೂರಿನ ಸೇಂಟ್ ಮೇರಿಸ್ ಶಾಲೆಯಲ್ಲಿ ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಕಡಗಂಚಿ, ಅಲ್...

Homeಸುದ್ದಿಗಳು

ಕ್ರೀಡಾಕೂಟಗಳು ಸ್ಪರ್ಧೆಯಾಗದೆ,ಹಬ್ಬದ ಸಂಭ್ರಮವಾಗಲಿ:ಶಾಸಕ ಬಿ.ದೇವೇಂದ್ರಪ್ಪ ಅಭಿಮತ.

ಹರಪನಹಳ್ಳಿ : ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳು ಕೇವಲ ಸ್ಪರ್ಧೆಯಾಗದೆ, ಹಬ್ಬದ ಸಂಭ್ರಮ ಮನೆಮಾಡಬೇಕು ಎಂದು ಶಾಸಕ...

Homeಸುದ್ದಿಗಳು

ಸೆ.19ರಂದು ಹರಪನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವಾ ಕಾರ್ಯಕ್ರಮ

ವಿಜಯನಗರ : ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ...

Homeಸುದ್ದಿಗಳು

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ : ಕಾಲಮಿತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಕ್ರಮ

ವಿಜಯನಗರ : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳು, ಬೇಡಿಕೆಗಳು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದುಕೊರತೆಗಳಿಗಾಗಿ...

Sirisuddi@gmail.com

'ಸಿರಿಸುದ್ದಿ.com' ಕರುನಾಡಿನ, ಅದರಲ್ಲೂ ವಿಶೇಷವಾಗಿ ಹರಪನಹಳ್ಳಿ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ನಂಬಿಕಾರ್ಹ ಆನ್‌ಲೈನ್ ಸುದ್ದಿ ಪೋರ್ಟಲ್. ರಾಜಕೀಯ, ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರವಾದ ಸುದ್ದಿಗಳನ್ನು ಯಾವುದೇ ರಾಜಿ ಇಲ್ಲದೆ, ಅತ್ಯಂತ ವೇಗವಾಗಿ ಓದುಗರಿಗೆ ತಲುಪಿಸುವುದೇ ನಮ್ಮ ಪ್ರಮುಖ ಉದ್ದೇಶ. ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಪ್ರಾಮಾಣಿಕ ಪತ್ರಿಕೋದ್ಯಮ ನಮ್ಮ ಹೆಗ್ಗುರುತು.